ಬಿ.ಸಿ.ಪಾಟೀಲ್ ಸಚಿವರಾಗಿ ಅಧಿಕಾರ ಸ್ವೀಕಾರ...ಹಂಸಭಾವಿಯಲ್ಲಿ ಸಂಭ್ರಮಾಚರಣೆ! - bc patil latest news
ಹಾವೇರಿ ಜಿಲ್ಲೆಯ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕ್ಷೇತ್ರದ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಹಂಸಭಾವಿ ಗ್ರಾಮದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಹಿರೇಕೆರೂರು ಕ್ಷೇತ್ರಕ್ಕೆ 30 ವರ್ಷಗಳ ನಂತರ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.