ಬಿಯರ್ ತುಂಬಿದ್ದ ಲಾರಿ ಪಲ್ಟಿ: ಬಿಯರ್ ಬಾಟಲ್ನೊಂದಿಗೆ ಮದ್ಯಪ್ರಿಯರು ಪರಾರಿ - ಲೈಟ್ ಕಂಬಕ್ಕೆ ಗುದ್ದಿದ ಬಿಯರ್ ಲಾರಿ
ಮೈಸೂರಿನಿಂದ ಮಂಗಳೂರಿಗೆ ಬಿಯರ್ ಸಾಗಿಸುತ್ತಿದ್ದ ಲಾರಿಯೊಂದು ಸುಳ್ಯ ತಾಲೂಕಿನ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ಜರುಗಿದ್ದು, ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಲಾರಿಯಲ್ಲಿ ಸುಮಾರು ರೂ. 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಬಿಯರ್ ಲಾರಿ ಮಗುಚಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ಗೊತ್ತಾಗುತ್ತಿದ್ದಂತೆ ಕೆಲವು ಬಿಯರ್ ಪ್ರಿಯರು ಸ್ಥಳಕ್ಕಾಗಮಿಸಿ ಬಾಟಲ್ಗಳನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.