ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಹೆಚ್ಚು ಸಚಿವ ಸ್ಥಾನ ಸಿಗಲಿದೆ: ಮಹಾಂತೇಶ ಕವಟಗಿಮಠ ವಿಶ್ವಾಸ - ಮಹಾಂತೇಶ ಕವಟಗಿಮಠ
ಚಿಕ್ಕೋಡಿ: ಇಲ್ಲಿನ ಸಿಎಸ್ಎಸ್ ಪ್ರೌಢ ಶಾಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚು ಸಚಿವ ಸ್ಥಾನ ಸಿಗಲಿದೆ. ಗೆದ್ದ ಎಲ್ಲರಿಗೂ ಸಚಿವ ಸ್ಥಾನ ಸಿಗಬಹುದು. ಬೆಳಗಾವಿಗೆ ಹೆಚ್ಚು ಸ್ಥಾನ ಸಿಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.