ಬಂದ್ ಎಫೆಕ್ಟ್: ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ ಬಳ್ಳಾರಿ ಕೇಂದ್ರ ಬಸ್ ನಿಲ್ದಾಣ - ಕರ್ನಾಟಕ ಬಂದ್
ಕೇಂದ್ರ ಮತ್ತು ರಾಜ್ಯ ಸರ್ಕಾರದ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಸೇರಿದಂತೆ ನಾನಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಿಜೆಪಿಯೇತರ ಪಕ್ಷಗಳು, ರೈತ, ಎಡ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆ ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣ ಜನರಿಲ್ಲದೇ ಬಿಕೋ ಎನ್ನುತ್ತಿದೆ. ಈ ಕುರಿತು ನಮ್ಮ ಬಳ್ಳಾರಿ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ..