ರಸ್ತೆ ದಾಟುವಾಗ ಹುಷಾರ್: ಮಹಿಳೆಗೆ ಬೈಕ್ ಡಿಕ್ಕಿ, ಸ್ಥಿತಿ ಗಂಭೀರ: VIDEO - ಕಾಲೇಜು ವಿದ್ಯಾರ್ಥಿಗಳ ಅಜಾಗರೂಕತೆ
ತುಮಕೂರು: ನಗರದ ಎಸ್ಐಟಿ ಬಡಾವಣೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಲೇಜು ವಿದ್ಯಾರ್ಥಿಗಳ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.