ವಿಡಿಯೋ: ಕೊಚ್ಚಿ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಹೊರ ತಂದ ಸವಾರ - ಕೊಪ್ಪಳ ಮಳೆ ಸುದ್ದಿ
ಕೊಪ್ಪಳ: ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಆಯತಪ್ಪಿ ಬಿದ್ದು ಮೊಪೆಡ್ ಸವಾರನೊಬ್ಬ ಹಗ್ಗದ ಸಹಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ಹಳ್ಳದಲ್ಲಿ ಈ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನಿನ್ನೆ ಸಂಜೆ ಸುರಿದ ಮಳೆಯಿಂದ ಘಟ್ಟಿರಡ್ಡಿಹಾಳ ಗ್ರಾಮದ ಬಳಿಯ ಹಳ್ಳವೂ ತುಂಬಿ ಹರಿದಿದೆ. ಈ ಸಂದರ್ಭದಲ್ಲಿ ಮೊಪೆಡ್ ಸವಾರನೊಬ್ಬ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದಾಗ ಘಟನೆ ನಡೆದಿದೆ.