ಹಾವೇರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ - ಹಿರೆಕೇರೂರು ಕ್ಷೇತ್ರದಿಂದ ಬಿ.ಸಿ.ಪಾಟೀಲ್ ಜಯ
ಹಾವೇರಿ: ಹಿರೇಕೆರೂರು ಕ್ಷೇತ್ರದಿಂದ ಬಿ.ಸಿ.ಪಾಟೀಲ್ ಹಾಗೂ ರಾಣೆಬೆನ್ನೂರ ಕ್ಷೇತ್ರದಿಂದ ಅರುಣ್ಕುಮಾರ್ ಪೂಜಾರ್ ಬಿಜೆಪಿ ಪಕ್ಷದಿಂದ ಗೆಲವು ಸಾಧಿಸಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಹಾವೇರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪರ ಘೋಷಣೆ ಕೂಗಿ, ಗುಲಾಲ್ ಎರಚಿ ಸಂಭ್ರಮಿಸಿದರು.