ಶಿವಮೊಗ್ಗ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರಿಂದ ಸಂಭ್ರಮಾಚರಣೆ - ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿ ಎದರು ಕಾರ್ಯಕರ್ತರ ಸಂಭ್ರಮಾಚರಣೆ
ಶಿವಮೊಗ್ಗ: ಉಪ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಸಿಎಂ ತವರು ಜಿಲ್ಲೆ ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿ ಎದರು ಪಟಾಕಿ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಅನರ್ಹ ಶಾಸಕರು ಜನರ ತೀರ್ಪಿನಿಂದ ಅರ್ಹರಾಗಿದ್ದಕ್ಕೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು. ಸಂಭ್ರಮಾಚರಣೆಯಲ್ಲಿ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್ ಸಹ ಭಾಗಿಯಾಗಿದ್ದರು.