ಶ್ರೀರಾಮಮಂದಿರದಲ್ಲಿ ಪೂಜೆ: ಸಿಹಿ ವಿತರಿಸಿ ಸಂಭ್ರಮಿಸಿದ ಓಲೇಕಾರ್
ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ನೇರವೇರುತ್ತಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ಶ್ರೀರಾಮಮಂದಿರದಲ್ಲಿ ಪೂಜೆ ಸಲ್ಲಿಸಿದರು. ಶ್ರೀರಾಮ, ಲಕ್ಷ್ಮಣ, ಸೀತೆ ಮತ್ತು ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷ ಪುಷ್ಪಗಳಿಂದ ಮೂರ್ತಿಗಳನ್ನ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಹಾವೇರಿ ಶಾಸಕ ನೆಹರು ಓಲೇಕಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ್ ಕಲಕೋಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಹಾವೇರಿ ಶಾಸಕ ನೆಹರು ಓಲೇಕಾರ್ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.