ರಾಣೆಬೆನ್ನೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್
ರಾಣೆಬೆನ್ನೂರು: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ವಿಧಾನಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅನರ್ಹ ಶಾಸಕ ಆರ್.ಶಂಕರ್ ಜತೆಯಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇತ್ತ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ಕೂಡ ಮುಖಂಡರ ಜತೆ ಆಗಮಿಸಿ ಚುನಾವಣಾಧಿಕಾರಿ ಎ.ದೇವರಾಜ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.