ಬೆಳಗಾವಿಯಲ್ಲಿ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ - BJP candidate Mangala Angadi
ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತದಾನಕ್ಕೆ ಆಗಮಿಸಿದ್ದು, ವಿಶ್ವೇಶ್ವರಯ್ಯ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆ ಎರಡರಲ್ಲಿ ಹಕ್ಕು ಚಲಾಯಿಸಿದರು. ಮತಗಟ್ಟೆಗೆ ಆಗಮಿಸುತ್ತಿದ್ದಂತೆ ಮತದಾರರಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಮಂಗಳಾ ಅವರು, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಈ ವೇಳೆ ಮಂಗಳಾ ಅಂಗಡಿಗೆ ಪುತ್ರಿಯರಾದ ಸ್ಪೂರ್ತಿ, ಶ್ರದ್ಧಾ ಸಾಥ್ ನೀಡಿದರು.