ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ - ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ
ತುಮಕೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆದರು. ನಂತರ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ನನ್ನ ಅಭಿವೃದ್ಧಿ ಕೆಲಸ ಹಾಗೂ ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದ ನಾನು ಆರ್.ಆರ್ ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇನೆ. ಶ್ರೀ ಶಿವಕುಮಾರ ಸ್ವಾಮೀಜಿಗಳ ಸೇವೆ ಸೂರ್ಯ-ಚಂದ್ರ ಇರುವವರೆಗೆ ನೆನಪಲ್ಲಿರುತ್ತದೆ. ಶ್ರೀಗಳ ಆಶೀರ್ವಾದ ನನ್ನ ಮೇಲಿದೆ ಎಂದರು.