ಉಡುಪಿಯಲ್ಲಿ ಬಿಜೆಪಿಯಿಂದ ಜನಸೇವಕ ಸಮಾವೇಶ: ಗ್ರಾ.ಪಂ ಚುನಾವಣೆಯಲ್ಲಿ ಗೆದ್ದವರಿಗೆ ಅಭಿನಂದನೆ - ಉಡುಪಿಯಲ್ಲಿ ಜನಸೇವಕ ಸಮಾವೇಶ
ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ದಿಸಿದವರು ಹಾಗೂ ಗೆದ್ದವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಹಾಗೂ ಮುಂದಿನ ತಾ.ಪಂ, ಜಿ.ಪಂ ಚುನಾವಣೆಗೆ ತಾಲೀಮು ಎಂಬಂತೆ ಉಡುಪಿಯಲ್ಲಿ ರಾಜ್ಯ ಬಿಜೆಪಿಯ ನೇತೃತ್ವದಲ್ಲಿ ಜನಸೇವಕ ಸಮಾವೇಶ ನಡೆಯಿತು. ಉಡುಪಿಯ ಅಮೃತ್ ಗಾರ್ಡನ್ನಲ್ಲಿ ನಡೆದ ಸಮಾವೇಶವನ್ನು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಹಲವರು ಭಾಗಿಯಾಗಿದ್ದರು.