ಅಮೇಥಿಯಲ್ಲಿ ಸೋಲುವ ಭಯದಿಂದ ವಯನಾಡ್ನಲ್ಲೂ ನಾಮಪತ್ರ ಸಲ್ಲಿಕೆ : ರಾಹುಲ್ ವಿರುದ್ಧ ಶ್ರೀರಾಮುಲು ವಾಗ್ದಾಳಿ - undefined
ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗುತ್ತದೆ. ಅಮೇಥಿಯಲ್ಲಿ ಸೋಲುವ ಭಯದಿಂದಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಸ್ಲಿಮರೇ ಹೆಚ್ಚಿರುವ ವಯನಾಡ್ನಲ್ಲೂ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿ ಪರ ಪ್ರಚಾರದ ವೇಳೆ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.