ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರ ಕಾರ್ಯಾಧ್ಯಕ್ಷ ಜೆಪಿ ನಡ್ಡಾ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ - ಬಿಜೆಪಿ ಕಾರ್ಯಕರ್ತರು
ಬೆಂಗಳೂರು: ರಾಜ್ಯಕ್ಕೆ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಆರ್ .ಅಶೋಕ್, ಸಂಸದ ಬಚ್ಚೇಗೌಡ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಏರ್ಪೋರ್ಟ್ಗೆ ಆಗಮಿಸಿ ನಡ್ಡಾರನ್ನು ಬರಮಾಡಿಕೊಂಡರು. ನಡ್ಡಾರವರ ಜೊತೆ ಕೆಐಎಎಲ್ನಲ್ಲಿ ಕೆಲಕಾಲ ಬಿಜೆಪಿ ನಾಯಕರು ಸಭೆ ನಡೆಸಿ ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಇನ್ನು ನಡ್ಡಾರವರು ಅಭಿಮಾನಿಗಳನ್ನು ಕಂಡು ಸಂತೋಷ ವ್ಯಕ್ತಪಡಿಸಿದರು.