ಬಿಜೆಪಿ ಗೆಲುವು ನಿಶ್ಚಿತ, ಆರೋಪಗಳಿಗೆ ಮುಂದೆ ಉತ್ತರ ನೀಡುವೆ: ಯಡಿಯೂರಪ್ಪ
ಹಾವೇರಿ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಹಾಸನ ಮತ್ತು ಕಲಬುರಗಿಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಗೆ ಅಭ್ಯರ್ಥಿಗಳೇ ಸಿಕ್ಕಿಲ್ಲಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಮಾತಿಗೆ ಪ್ರತ್ಯತ್ತರ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಮತ್ತು ದೇವೇಗೌಡರ ಸೋಲು ನಿಶ್ಚಿತ. ಆರೋಪ ಪ್ರತ್ಯಾರೋಪಕ್ಕೆ ಮುಂದಿನ ದಿನಮಾನಗಳಲ್ಲಿ ಉತ್ತರ ನೀಡುವೆ. ಬಿಜೆಪಿ ದೇಶದ 300 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದರು.