ಕರ್ನಾಟಕ

karnataka

ETV Bharat / videos

ಸಮುದ್ರದಲ್ಲಿ ಮಗುಚಿ ಬಿದ್ದ ದೋಣಿ​​​... ಮೀನುಗಾರರು ಪ್ರಾಣಾಪಾಯದಿಂದ ಪಾರು! - ಮೀನುಗಾರರು ಪ್ರಾಣಾಪಾಯದಿಂದ ಪಾರು

By

Published : Jan 28, 2021, 10:47 PM IST

ಉಡುಪಿ: ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ದೋಣಿ​​ ಮಗುಚಿ ಬಿದ್ದ ಘಟನೆ ಗಂಗೊಳ್ಳಿ ಸಮೀಪ ಗುರುವಾರ ಬೆಳಗ್ಗೆ ನಡೆದಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಗೊಳ್ಳಿ ನಿವಾಸಿಗಳಾದ ಗುರುರಾಜ ಖಾರ್ವಿ (30), ಮಿಥುನ್ ಖಾರ್ವಿ (26), ಚಂದ್ರ ಖಾರ್ವಿ (45) ಮತ್ತು ರೋಶನ್ (35) ರಕ್ಷಿಸಲ್ಪಟ್ಟ ಮೀನುಗಾರರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ 'ಸೌಮ್ಯ' ಹೆಸರಿನ ನಾಡದೋಣಿ ಸಮುದ್ರದಲ್ಲಿ ಗಂಗೊಳ್ಳಿಯಿಂದ ಸುಮಾರು 7 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ಸಮುದ್ರದ ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದರೆ, ಇನ್ನಿಬ್ಬರು ಮೀನುಗಾರರನ್ನು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ದೋಣಿ, ಇಂಜಿನ್ ಮತ್ತು ಬಲೆ ಸಮುದ್ರಪಾಲಾಗಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details