ಕಟ್ ಮಾಡಿದ್ದನ್ನ ಜೋಡಿಸುವಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು.. ಜೆಸ್ಕಾಂ ವಿರುದ್ಧ ಪ್ರತಿಭಟನೆ
ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಹುಲಗಿಯಲ್ಲಿ ನಡೆದಿದೆ. ಮಹ್ಮದ್ ರಫಿ (22) ಎಂಬಾತ ಸಾವನ್ನಪ್ಪಿರುವ ಯುವಕ. ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆ ಜೆಸ್ಕಾಂ ಸಿಬ್ಬಂದಿ ರಫಿಯ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ವಿದ್ಯುತ್ ಬಿಲ್ ಪಾವತಿಸುವುದಾಗಿ ಹೇಳಿದರೂ ಸಹ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಸಂಜೆ ವಿದ್ಯುತ್ ವೈರ್ ಜೋಡಿಸುವಾಗ ವಿದ್ಯುತ್ ಸ್ಪರ್ಶಿಸಿ ಮಹ್ಮದ್ ರಫಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಜೆಸ್ಕಾಂ ವಿರುದ್ಧ ಮೃತನ ಸಂಬಂಧಿಕರು ಹಾಗೂ ಸ್ಥಳೀಯರು ಹುಲಗಿ ಗ್ರಾಮದ ನಂದಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಜೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.