ಬಿಎಸ್ವೈಗಾಗಿ ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರಾರ್ಥನೆ - undefined
ರಾಯಚೂರು/ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವುದೇ ಅಡ್ಡಿ ಆತಂಕ ಇಲ್ಲದೆ ಅಧಿಕಾರ ಸ್ವೀಕಾರ ಮಾಡಿ ಸರ್ಕಾರದ ಅವಧಿ ಪೂರ್ಣಗೊಳಿಸಲಿ ಎಂದು ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ಕೊಲ್ಲೂರು ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬಿಜೆಪಿ ಮುಖಂಡ ರಾಜಶೇಖರ ಅವರು ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಪಂಚಾಮೃತ ಅಭಿಷೇಕ ಮಾಡಿಸಿದರು. ಅಲ್ಲದೇ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಲಕಪಳ್ಳಿ ಗ್ರಾಮದ ಜೋಡಿ ಅಂಜನೇಯನ ದೇಗುಲದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಬಿಸ್ವೈ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಸರ್ಕಾರಕ್ಕೆ ಯಾವುದೇ ವಿಘ್ನ ಎದುರಾಗಬಾರದೆಂದು ಪ್ರಾರ್ಥಿಸಿದರು.