ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ಬಿಎಸ್ಎನ್ಎಲ್ ಕಂಪನಿ..
ಕಾರವಾರ: ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ಇನ್ನೂ ಸಹ ಬೂದಿ ಮುಚ್ಚಿದ ಕೆಂಡದಂತಿದೆ. ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕಾರವಾರ ಸೇರಿ ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದರ ಬೆನ್ನಲ್ಲೇ ಕಾರವಾರ ನಗರದಲ್ಲಿ ಸಂಚರಿಸಿದ ಕೆಲ ಬಿಎಸ್ಎನ್ಎಲ್ ಗ್ರಾಹಕರ ಮೊಬೈಲ್ಗೆ ವೆಲ್ಕಮ್ ಟು ಮಹಾರಾಷ್ಟ್ರ ಎನ್ನುವ ಸಂದೇಶ ಬರುತ್ತಿರುವುದು ಸ್ಥಳೀಯರಲ್ಲಿ ಮತ್ತೆ ಆಕ್ರೋಶಕ್ಕೆ ಕಾರಣವಾಗಿದೆ.
Last Updated : Dec 3, 2020, 12:46 PM IST