15 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲುವ ಭರವಸೆ ಸಿಎಂಗೆ ಸಿಕ್ಕಿದೆ: ಬಿ.ಸಿ.ಪಾಟೀಲ್ - ಉಪಚುನಾವಣೆ 2019
ಉಪಚುನಾವಣೆಯಲ್ಲಿ 15ಕ್ಕೆ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿ ಗೆಲ್ಲುವ ಭರವಸೆ ಯಡಿಯೂರಪ್ಪನವರಿಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರು ಅರಾಮವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸುತ್ತಿದ್ದಾರೆ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಪುರದಕೇರಿಯಲ್ಲಿ ಮತಯಾಚನೆ ವೇಳೆ ಮಾತನಾಡಿದ ಅವರು, ಅಭ್ಯರ್ಥಿಯ ಗೆಲುವಿಗಾಗ ಸಿಎಂ ಪದೇ ಪದೇ ಹಿರೇಕೆರೂರಿಗೆ ಬರುತ್ತಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ರು.