ಕೇಂದ್ರ ಬಜೆಟ್ 2020-21... ಕಲ್ಪತರು ನಾಡಿಗೆ ಹೇಗೆ ಸಹಕಾರಿ? - ಬಜೆಟ್ 2020 ಭಾರತ
ತುಮಕೂರು: ಸಬ್ ಅರ್ಬನ್ ರೈಲ್ವೆ ಯೋಜನೆಗೆ ಕೇಂದ್ರದ ಬಜೆಟ್ನಲ್ಲಿ ಅನುದಾನ ಮೀಸಲಿಟ್ಟಿರುವುದು ತುಮಕೂರು ಹಾಗೂ ಬೆಂಗಳೂರು ನಡುವಿನ ಸಂಪರ್ಕಕ್ಕೆ ಸಹಕಾರಿಯಾಗಲಿದೆ. ಭವಿಷ್ಯದಲ್ಲಿ ತುಮಕೂರಿನ ವಾಣಿಜ್ಯ ವ್ಯವಹಾರಕ್ಕೆ ಸಹಕಾರಿಯಾಗಲಿದೆ ಎಂದು ತುಮಕೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ. ಈಟಿವಿ ಭಾರತ ಜೊತೆ ಮಾತನಾಡಿರುವ ಅವರು ಆರ್ಥಿಕ ಹಿಂಜರಿತ ಸೇರಿದಂತೆ ವಿವಿಧ ವಲಯಕ್ಕೆ ಪುನಶ್ಚೇತನ ನೀಡಲು ಪೂರಕವಾಗಿರುವ ಬಜೆಟ್ ಇದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.