ಎತ್ತಿನಗಾಡಿ ಓಟದ ಸ್ಪರ್ಧೆ: ನಿಯಂತ್ರಣ ತಪ್ಪಿ ಬಿದ್ದ ಸ್ಫರ್ಧಾಳು
ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎತ್ತುಗಳು ನಿಯಂತ್ರಣ ತಪ್ಪಿದರೂ, ಸ್ಪರ್ಧಾಳುಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಹೆಚ್.ಡಿ ಕೋಟೆ ತಾಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ದೀಪಾವಳಿಯ ಪ್ರಯುಕ್ತ ಆಯೋಜಿಸಿದ್ದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ, ಓಡುವಾಗ ಎತ್ತುಗಳ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಪರಿಣಾಮ, ಮನೆ ಗೋಡೆ ಕುಸಿತವಾಗಿದೆ. ಸ್ಪರ್ಧಾಳುಗಳಿಗೆ ಅದೃಷ್ಟವಶಾತ್ ಯಾವುದೇ ಹಾನಿಯಾಗದೆ ಬಚಾವಾಗಿದ್ದಾರೆ. ಎತ್ತುಗಳಿಗೆ ಸಣ್ಣಪುಟ್ಟ ಗಾಯಗಳಿವೆ.