ಬಸ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.. ಚಾಲಕನ ಅಜಾಗರೂಕತೆ ಸ್ಪಷ್ಟ..
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಓರ್ವ ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಪಟ್ಟಣದ ಶ್ರೀಕಂಠಯ್ಯ ಸರ್ಕಲ್ ಬಳಿ ಜರುಗಿದೆ. ಬಸ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂಬುದು ಸ್ಪಷ್ಟವಾಗಿ ಕಂಡು ಬಂದಿದೆ. ಶ್ರೀಕಂಠಯ್ಯ ವೃತ್ತದಲ್ಲಿನ ಸ್ಪೀಡ್ ಬ್ರೇಕರ್ ಮೇಲೆ ಅತಿ ವೇಗವಾಗಿ ಚಾಲನೆ ಮಾಡಲು ಹೋಗಿ ಅಪಘಾತ ಸಂಭವಿಸಿದೆ.