ಚಿಕ್ಕಮಗಳೂರಿನ ಕೆಲ ಭಾಗದಲ್ಲಿ ಬಸ್ ಸಂಚಾರ ಪುನಾರಂಭ.. - Chikmagalur
ಕೆಎಸ್ಆರ್ಟಿಸಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಕೆಎಸ್ಆರ್ಟಿಸಿ ಸಿಬ್ಬಂದಿ ಕರೆ ನೀಡಿದ ಮುಷ್ಕರ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮುಷ್ಕರಕ್ಕೆ ಚಿಕ್ಕಮಗಳೂರು ಕೆಎಸ್ಆರ್ಟಿಸಿ ಸಿಬ್ಬಂದಿ ಬೆಂಬಲ ನೀಡಿದ್ರೂ ಇಂದು ಬೆಳಗ್ಗೆಯಿಂದ ಕೆಲ ಬಸ್ಗಳು ರಸ್ತೆಗಿಳಿದಿವೆ. ಜಿಲ್ಲೆಯ ಕೆಲ ಭಾಗದಲ್ಲಿ ಬಸ್ ಸಂಚಾರ ಪ್ರಾರಂಭ ಮಾಡಿರುವುದರಿಂದ ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ. ತಮ್ಮ ತಮ್ಮ ಊರಿಗೆ ಹೋಗಲು ಕಾತುರದಿಂದ ಕಾಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಈ ಮುಷ್ಕರದಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ. ನಿಧಾನವಾಗಿ ಬಸ್ಗಳು ಸಂಚಾರ ಪ್ರಾರಂಭಿಸಿವೆ. ಈ ಕುರಿತು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಸಿದ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.