ಕರ್ನಾಟಕ

karnataka

By

Published : Oct 15, 2020, 2:03 PM IST

ETV Bharat / videos

ರಂಗೇರಿದ ಶಿರಾ ಉಪ ಕದನ: ಕಾಂಗ್ರೆಸ್​​ನಿಂದ ಬೃಹತ್ ಮೆರವಣಿಗೆ

ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಪ್ರಚಾರದ ಭರಾಟೆ ರಂಗೇರಿದ್ದು, ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಶಿರಾ ಪಟ್ಟಣದಲ್ಲಿ ಕಾರ್ಯಕರ್ತರ ಬೃಹತ್​ ಮೆರವಣಿಗೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡಾ. ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

ABOUT THE AUTHOR

...view details