ಹಿರೇಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ - ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ
ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್. ಬನ್ನಿಕೋಡ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಪ್ರಚಾರಸಭೆ ನಡೆಸಿದ್ರು. ಕಾಂಗ್ರೆಸ್ ಅಭ್ಯರ್ಥಿಯಾದ ತಮಗೆ ಮತ ನೀಡಿ ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ರು. ಮತ್ತೊಂದೆಡೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಮಾಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ತಮ್ಮ ಬೆಂಬಲಿಗರನ್ನ ಬಿಜೆಪಿಗೆ ಸೇರ್ಪಡೆಗೊಳಿಸಿದ್ರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ಹಲವು ಮುಖಂಡರು ಪಾಟೀಲ್ ಬೆಂಬಲಿಗರನ್ನ ಪಕ್ಷಕ್ಕೆ ಬರಮಾಡಿಕೊಂಡರು.