ಪೌರತ್ವ ತಿದ್ದುಪಡಿ ಮಸೂದೆ: ಶಿವಮೊಗ್ಗದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಪ್ರತಿಭಟನೆ - ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಪ್ರತಿಭಟನೆ ಶಿವಮೊಗ್ಗ ಸುದ್ದಿ
ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರಲು ತೀರ್ಮಾನಿಸಿರುವ ವಿವಾದಿತ 'ಪೌರತ್ವ ತಿದ್ದುಪಡಿ ಮಸೂದೆ'ಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಸೋಮವಾರ ಲೋಕಸಭೆಯಲ್ಲಿ ಅನುಮೋದನೆಗೊಂಡಿರುವ ಮಸೂದೆಯನ್ನು ಕೂಡಲೇ ರದ್ದು ಪಡಿಸಬೇಕು. ಮುಸ್ಲೀಮರು ಹೊರತುಪಡಿಸಿ ದೇಶದ ಎಲ್ಲ ಧರ್ಮದ ಜನರನ್ನೂ ಈ ಮಸೂದೆಯಲ್ಲಿ ಸೇರಿಸಲಾಗಿದೆ. ಹಾಗಾಗಿ ಈ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ರು.