ವೈದ್ಯಕೀಯ ವಿದ್ಯಾರ್ಥಿಗಳಿಂದ ಕ್ಯಾಂಡೆಲ್ ಪ್ರತಿಭಟನೆ - ಶಿವಮೊಗ್ಗ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ ಸುದ್ದಿ
ಶಿವಮೊಗ್ಗ: ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿನ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳು ಕ್ಯಾಂಡೆಲ್ ಹಚ್ಚಿ ಪ್ರತಿಭಟನೆ ನಡೆಸಿದರು. ಸಿಮ್ಸ್ ವೈದ್ಯಕೀಯ ಕಾಲೇಜಿನಿಂದ ನಗರದ ಗೋಪಿ ವೃತ್ತದವರೆಗೆ ಕ್ಯಾಂಡಲ್ ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವೈದ್ಯರಿಗೆ ರಕ್ಷಣೆ ನೀಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.