ಬೆಂಗಳೂರು: ರಸ್ತೆ ಮಧ್ಯೆ ಹೊತ್ತಿ ಉರಿದ ದುಬಾರಿ ಬೆಲೆಯ ಕಾರು! - ಬಾಣಸವಾಡಿ ಬಳಿ ಕಾರಿಗೆ ಬೆಂಕಿ
ಬೆಂಗಳೂರು: ಲ್ಯಾಂಡ್ ರೋವರ್ ಕಾರೊಂದು ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ನಗರದ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲಾಣ್ಯ ನಗರದ ಫ್ಲೈ ಓವರ್ ಮೇಲೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕೆಳಗಿಳಿದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂರ್ಟ್ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.