ಕರ್ನಾಟಕ

karnataka

ETV Bharat / videos

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ - ಕಾರಿನಲ್ಲಿ ಬೆಂಕಿ

By

Published : Mar 1, 2021, 3:28 PM IST

‌ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರಿನ ಗ್ಯಾಸ್ ಕಿಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದವರು ಕೆಳಗೆ ಇಳಿದಿದ್ದಾರೆ. ಈ ವೇಳೆ ಸ್ಥಳೀಯ ಎಳನೀರು ಅಂಗಡಿಯವರು ಹಾಗೂ ಸಾಗರ ನಗರ ಸಭೆ ಆಶ್ರಯ ಸಮಿತಿ ಹಾಗೂ ಅಂಬ್ಯುಲೆನ್ಸ್ ಸಂಘದ ಸದಸ್ಯರು ಆದ ಎಸ್.ಎಂ. ಬಾಷಾ ರವರು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ನಂತರ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details