ರಸ್ತೆ ಪಕ್ಕದಲ್ಲಿ ನಿಂತವರ ಮೇಲೆ ಹರಿದ ಕಾರು; ಐವರು ಗಂಭೀರ - ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿ
ರಸ್ತೆ ಪಕ್ಕದಲ್ಲಿ ನಿಂತವರ ಮೇಲೆ ಕಾರು ಹರಿದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ನಡೆದಿದೆ. ಬೆಳವಡಿ ಗ್ರಾಮದ ನಿವಾಸಿಗಳಾದ ಮಹೇಶ್, ಸಂಜು, ವಿನೋದ, ಸಿದ್ದಾರೋಡ, ಮಲ್ಲಪ್ಪ ಎಂಬುವರ ಮೇಲೆ ವೇಗವಾಗಿ ಬಂದ ಕಾರು ಹರಿದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಐವರನ್ನು ಬೈಲಹೊಂಗಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.