ಕೊರೊನಾ ವ್ಯಾಪಿಸದಂತೆ ಎಚ್ಚರಿಕೆ ವಹಿಸಿ: ಶಾಸಕ ಎ.ಎಸ್. ಪಾಟೀಲ ನಡಹಳ್ಳಿ - ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿಕೆ
ಮುದ್ದೇಬಿಹಾಳ: ಕೊರೊನಾ 2ನೇ ಅಲೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು. ತಾಲೂಕಾಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುದ್ದೇಬಿಹಾಳ, ತಾಳಿಕೋಟಿ ತಾಲೂಕಿನ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಬೇಕು. ಜತೆಗೆ ಸ್ಯಾನಿಟೈಸರ್ ಬಳಸಬೇಕು. ಸಾಧ್ಯವಾದಷ್ಟು ಮಟ್ಟಿಗೆ ಮದುವೆ ಕಾರ್ಯಕ್ರಮಗಳನ್ನು ಕುಟುಂಬಗಳ ಮಧ್ಯೆಯೇ ಏರ್ಪಡಿಸಿಕೊಳ್ಳುವುದು ಒಳ್ಳೆಯದು ಎಂದು ಶಾಸಕರು ಸಲಹೆ ನೀಡಿದ್ದಾರೆ.