ತನ್ವೀರ್ ಸೇಠ್ ಹಲ್ಲೆ ಪ್ರಕರಣ ಅಗತ್ಯ ಬಿದ್ರೆ ಸಿಬಿಐ ತನಿಖೆ.. ಸಚಿವ ಶ್ರೀರಾಮುಲು - Tanveer Sett attack case to probe cbi
ಶಾಸಕ ತನ್ವೀರ್ ಸೇಠ್ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿದ್ದು ಅಗತ್ಯ ಬಿದ್ದರೆ ಸಿಬಿಐ ತನಿಖೆ ನಡೆಸಲು ಸಿದ್ಧ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಮೈಸೂರಿನಲ್ಲಿ ಹಲ್ಲೆಗೊಳಗಾದ ಶಾಸಕ ತನ್ವೀರ್ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತನ್ವೀರ್ ಸೇಠ್ ಶೀಘ್ರವೇ ಗುಣಮುಖರಾಗಲಿ ಎಂದು ತಾಯಿ ಶ್ರೀ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳುತ್ತೇನೆ. ಅಗತ್ಯ ಬಿದ್ದರೆ ಹಲ್ಲೆ ಪ್ರಕರಣವನ್ನು ಸಿಬಿಐಗೂ ತನಿಖೆ ನಡೆಸಲು ಸಿದ್ಧರಿದ್ದೇವೆ ಎಂದರು.