ಶಿವಮೊಗ್ಗದಲ್ಲಿ ಸಿಎಂ ಮನೆ ಮುಂದೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ - ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ
ಶಿವಮೊಗ್ಗ: ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿನೋಬಾ ನಗರದಲ್ಲಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು.