ಕಡಲ ತೀರಗಳಲ್ಲಿ 144 ಸೆಕ್ಷೆನ್ ಜಾರಿ: ಉಡುಪಿಯಲ್ಲಿ ಹೊಸ ವರ್ಷಾಚರಣೆಗೆ ಡಿಸಿ ಬ್ರೇಕ್ - ಉಡುಪಿಯಲ್ಲಿ ಹೊಸ ವರ್ಷಾಚರಣೆ
ಉಡುಪಿ: ಜಿಲ್ಲೆಯಲ್ಲಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಕಡಲ ತೀರಗಳಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳು ಹಾಗೂ ಬೀಚ್ಗಳಲ್ಲಿ ಸಂಜೆ 6 ಗಂಟೆಯ ನಂತರ ಓಡಾಟ ನಡೆಸುವುದು, ವಿಹರಿಸುವುದಕ್ಕೆ ಅವಕಾಶವಿಲ್ಲ. ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಎಲ್ಲರೂ ಸಹ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.