ನಿರುದ್ಯೋಗ ನಿರ್ಮೂಲನೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ.. ಕಾಂಗ್ರೆಸ್ ಆಕ್ರೋಶ - ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಗಳೇ ಉರುಳಿದರೂ ನಿರುದ್ಯೋಗ, ಬಡತನ ನಿರ್ಮೂಲನೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಕೈ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿ ಮುಂದೆ ಜಮಾಯಿಸಿದ ಕೈ ಕಾರ್ಯಕರ್ತರು, ಪ್ರಧಾನಿ ಮೋದಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.