ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಬೈ ಎಲೆಕ್ಷನ್‌ನಲ್ಲಿ ನಮಗೇ ಗೆಲುವು.. ಕೇಂದ್ರ ಸಚಿವ ಜೋಶಿ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪುತ್ತೂರು:ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸ್ಪಷ್ಟ ಸೂಚನೆ ನೀಡಲಿದ್ದಾರೆ ಅಂತಾ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ವಿ.ಜೋಶಿ ಹೇಳಿದ್ದಾರೆ. ಈ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂದರು.