ತುಮಕೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಏ.30ರ ವರೆಗೆ ಅವಕಾಶ - millet purchase news
ತುಮಕೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಈ ಸಾಲಿನ ಕನಿಷ್ಠ ಬೆಂಬಲ ಬೆಲೆ(ಎಂ.ಎಸ್.ಪಿ) ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಏಪ್ರಿಲ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ಏಪ್ರಿಲ್ 5ರ ವರೆಗೆ ಆಯಾ ತಾಲೂಕು ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಾಯಿತ ರೈತರಿಂದ ಮಾತ್ರ ರಾಗಿಯನ್ನು ಖರೀದಿಸಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮನವಿ ಮಾಡಿದ್ದಾರೆ.