ಮಾಜಿ ಸಚಿವ ಡಿ ಎನ್ ಜೀವರಾಜ್ರನ್ನು ತರಾಟೆಗೆ ತೆಗೆದುಕೊಂಡ ಮಲೆನಾಡ ಜನತೆ! - ಮಾಜಿ ಸಚಿವ ಡಿಎನ್ ಜೀವರಾಜ್
ಚಿಕ್ಕಮಗಳೂರು : ಮಾಜಿ ಸಚಿವ ಡಿ ಎನ್ ಜೀವರಾಜ್ರನ್ನು ಮಲೆನಾಡು ಭಾಗದ ಜನರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಹುಲಿ ಯೋಜನೆ ಹಾಗೂ ಕಸ್ತೂರಿ ರಂಗನ್ ವರದಿ ವಿರೋಧಿಸಿ ಈ ಭಾಗದಲ್ಲಿ ಹತ್ತಾರು ಗ್ರಾಮಗಳು ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ನಡುವೆಯೂ ಚುನಾವಣಾ ಸಭೆ ಮಾಡಲು ತೆರಳಿದ್ದ ಮಾಜಿ ಸಚಿವ ಡಿ ಎನ್ ಜೀವರಾಜ್ ಅವರನ್ನು ಗ್ರಾಮಸ್ಥರು ರಸ್ತೆಯಲ್ಲಿಯೇ ತಡೆದು, ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿ ಅವರನ್ನ ತಬ್ಬಿಬ್ಬುಗೊಳಿಸಿದ್ದಾರೆ.