ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಬಿಎಸ್ವೈ ಭೇಟಿ, ಹೋಮದಲ್ಲಿ ಭಾಗಿ - ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠ
ತುಮಕೂರು: ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳ, 12ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದ ಹಿನ್ನೆಲೆ ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ಮೃತ್ಯುಂಜಯ ಹೋಮದ ಪೂರ್ಣಾಹುತಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡರು. ನಂತರ ಮಠದಲ್ಲಿರುವ ಕಾಡಸಿದ್ದೇಶ್ವರರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಶ್ರೀ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಸಚಿವ ಸೋಮಣ್ಣ, ಶಾಸಕ ಬಿ.ಸಿ. ನಾಗೇಶ್ ಹಾಜರಿದ್ದರು.