ಸಿಎಂ ತವರು ಜಿಲ್ಲೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭೇಟಿ: ಮಹತ್ವದ ಸಭೆ - ಪ್ರವೀಣ್ ಸೂದ್ ಶಿವಮೊಗ್ಗ ಜಿಲ್ಲೆಗೆ ಭೇಟಿ
ಶಿವಮೊಗ್ಗ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಗರದ ಡಿಎಆರ್ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ಜಿಲ್ಲೆಯ ಕಾನೂನು ಸುವ್ಯವಸ್ಥೆ, ರೌಡಿಗಳ ಮಾಹಿತಿ ಸೇರಿದಂತೆ ನಕ್ಸಲ್ ಚಟುವಟಿಕೆಗಳ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ಹಾಗೂ ಕೋಮುಗಲಭೆ ನಡೆಯದಂತೆ ಮುನ್ನಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಪೂರ್ವ ವಲಯ ಐಜಿಪಿ ರವಿ, ಶಿವಮೊಗ್ಗ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಎಎಸ್ಪಿ ಡಾ. ಶೇಖರ್ ಹಾಜರಿದ್ದರು.