ಜಜೆಟ್ ಬಗ್ಗೆ ಚಿಕ್ಕಮಗಳೂರು ಮಂದಿಗಿದ್ದ ನಿರೀಕ್ಷೆ ಏನು.? ಹೇಳಿದ್ದೇನು..? - ರಾಜ್ಯ ಬಜೆಟ್ 2021
ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೆಲವು ಸ್ಥಳೀಯ ರಾಜಕಾರಣಿಗಳು ಹಾಗೂ ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಇಂದಿನ ಬಜೆಟ್ ಬಗ್ಗೆ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದೆವು. ನೀರಾವರಿ ಯೋಜನೆಗಳು ಹಾಗೂ ಅಭಿವೃದ್ಧಿ, ಕಾಫಿ ಬೆಳೆಗಾರರ ಸಮಸ್ಯೆ, ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಇದ್ಯಾವುದೂ ನೆರವೇರಿಲ್ಲ ಎಂದರು.