ಕಬ್ಬನ್ ಪಾರ್ಕ್ನಲ್ಲಿ ಮಕ್ಕಳ ದಿನಾಚರಣೆ: ಕುಣಿದು ಕುಪ್ಪಳಿಸಿದ ಚಿಣ್ಣರು - ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಹಾಗೂ ತೋಟಗಾರಿಕೆ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ
ಬೆಂಗಳೂರು : ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಹಾಗೂ ತೋಟಗಾರಿಕೆ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಆಚರಿಸಲಾಯಿತು. ನಗರದ ಕಬ್ಬನ್ ಪಾರ್ಕ್ ಮಹಾರಾಜ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಬಾಲಭವನ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್, ಸಮಾಜ ಸೇವಕಿ ಕುಸುಮಾ, ತೋಟಗಾರಿಕೆ ಇಲಾಖೆ ನಿರ್ದೇಶಕ ಡಾ ಜಗದೀಶ್ , ನಟಿ ಸಾತ್ನಿಕಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.