ಸೆ. 28ರಂದು ಚಿತ್ರದುರ್ಗ ಬಂದ್.. ವಿವಿಧ ಸಂಘಟನೆಗಳಿಂದ ಬೆಂಬಲ
ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಸೆ.28ರಂದು ಚಿತ್ರದುರ್ಗ ಬಂದ್ ಮಾಡಲು ರೈತ ಪರ ಸಂಘಟನೆಗಳು ನಿರ್ಧರಿಸಿವೆ. ಬಂದ್ಗೆ ಕನ್ನಡಪರ ಸಂಘಟನೆಗಳು, ಆಟೋ ಹಾಗು ಲಾರಿ ಮಾಲೀಕರ ಸಂಘ, ದಲಿತಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅಂದು ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಮಾಡಲು ಪ್ರಯತ್ನಿಸುತ್ತೇವೆ ಎಂದು ಕರ್ನಾಟ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್ ತಿಳಿಸಿದರು.