ತುಮಕೂರು : ಸರಳವಾಗಿ ಕ್ರಿಸ್ಮಸ್ ಆಚರಿಸಿದ ಕ್ರೈಸ್ತ ಬಾಂಧವರು - christmas 2020 celebration
ಕೋವಿಡ್-19 ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಚರ್ಚ್ಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಿದರು. ಚರ್ಚ್ ಸರ್ಕಲ್ ಬಳಿ ಇರುವ ಸಿಎಸ್ಐ ವೆಸ್ಲಿ ಚರ್ಚ್ಗೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಮಾಸ್ಕ್ ಧರಿಸದೆ ಬಂದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಅಲ್ಲದೇ ಚರ್ಚ್ನ ಆವರಣದಲ್ಲಿ ಎಲ್‌ಇಡಿ ಮೂಲಕ ಫಾದರ್ ಪ್ರಾರ್ಥನೆ ಸಲ್ಲಿಸುವುದನ್ನು ನೋಡಲು ಅವಕಾಶ ಕಲ್ಪಿಸಲಾಗಿತ್ತು. ಅದೇ ರೀತಿ ಜಿಲ್ಲೆಯಲ್ಲಿರುವ ಎಲ್ಲಾ ಚರ್ಚ್ಗಳಲ್ಲೂ ಸರಳವಾಗಿ ಕ್ರಿಸ್ಮಸ್ ಆಚರಿಸಲಾಯಿತು.