ಅಂಗನವಾಡಿ ಕಾರ್ಯಕರ್ತೆ ಸಾವಿಗೆ ನ್ಯಾಯ ಒದಗಿಸಿ: ಸಿಐಟಿಯು, ರೈತ ಸಂಘಟನೆ ಜಂಟಿ ಪ್ರತಿಭಟನೆ - akkanagamma
ಕಲಬುರಗಿ: ಸರಿಯಾದ ಸಮಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿರುವ ಅಂಗನವಾಡಿ ಕಾರ್ಯಕರ್ತೆಯ ಸಾವಿಗೆ ನ್ಯಾಯ ಒದಗಿಸಬೇಕು. ಈ ಘಟನೆಗೆ ಕಾರಣರಾದವರ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಿಐಟಿಯು ಮತ್ತು ಕರ್ನಾಟಕ ಪ್ರಾಂತ ರೈತ ಸಂಘಟನೆ ಕಾರ್ಯಕರ್ತರು ಜಂಟಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ಹಿಂದೆ ರಕ್ತದೊತ್ತಡ ಕಡಿಮೆ, ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹೊನ್ನಕಿರಣಗಿ ಗ್ರಾಮದ ನಿವಾಸಿ, ಅಂಗನವಾಡಿ ಕಾರ್ಯಕರ್ತೆ ಅಕ್ಕನಾಗಮ್ಮ ಎಂಬುವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದರು. ಇನ್ನು ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಧೋರಣೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.