ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ವೈ: ಸಚಿವರು,ಶಾಸಕರ ಸಾಥ್ - ಕೆ.ಆರ್.ಎಸ್.ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುನ್ನ ದೇವಿಗೆ ಪೂಜೆ
ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಶೇಷ ಪೂಜೆ ಸಲ್ಲಿಸಿದರು. ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುನ್ನ ಮೈಸೂರಿಗೆ ಆಗಮಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ದೇವಿ ದರ್ಶನ ಪಡೆದರು. ಸಿಎಂ ಜೊತೆ ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಸಂಸದ ಪ್ರತಾಪಸಿಂಹ, ಶಾಸಕ ಎಸ್.ಎ.ರಾಮದಾಸ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ರಾಜಕೀಯ ಮುಖಂಡರು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.