ನಾಡು ಕಂಡ ಶ್ರೇಷ್ಠ ವಿಜ್ಞಾನಿಯನ್ನು ಕಳೆದುಕೊಂಡಿದ್ದೇವೆ: ರೊದ್ದಂ ನಿಧನಕ್ಕೆ ಸಿಎಂ ಸಂತಾಪ - ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ
ಬೆಂಗಳೂರು: ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಿ ಎಲ್ ರಸ್ತೆಯ ಜಲದರ್ಶಿನಿ ಲೇಔಟ್ ಬಳಿ ಇರುವ ನಿವಾಸಕ್ಕೆ ಆಗಮಿಸಿದ ಸಿಎಂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡು ಕಂಡ ಶ್ರೇಷ್ಠ ವಿಜ್ಞಾನಿಯನ್ನು ಇಂದು ಕಳೆದುಕೊಂಡಿದ್ದೇವೆ. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅವರು ಹೆಸರು ಮಾಡಿದ್ದು, ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಇವರ ಅಂತ್ಯಕ್ರಿಯೆಯನ್ನು ಇಂದು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ತಿಳಿಸಿದರು.