ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ.. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ - mysore dasara
ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿರುವ ನಂದಿಧ್ವಜಕ್ಕೆ 2.59ರಿಂದ 3.20ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪೂಜೆ ಸಲ್ಲಿಸಿದರು. ಈ ಬಾರಿ ಕೋವಿಡ್ ನಿಯಮಾವಳಿ ಹಿನ್ನೆಲೆ ನಂದಿಧ್ವಜ ಕುಣಿತವು ಅರಮನೆ ಆವರಣಕ್ಕೆ ಪ್ರವೇಶಿಸಲಿಲ್ಲ.